ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಐದು ಪ್ರಮುಖ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಉದ್ಯೋಗಿನಿ, ಚೇತನ, ಧನಶ್ರೀ ಸೇರಿದಂತೆ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಬಯಸುವ ಮಹಿಳೆಯರು ಇದೀಗ 2026ರ ನವೆಂಬರ್ 30ರವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಐದು ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲ್ಲು ನವೆಂಬರ್.30, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ನಂ.18,ಕೃಷಿ ಭವನ,02ನೇ ಮಹಡಿ, ನೃಪತುಂಗ ರಸ್ತೆ. ಕ.ರಾ.ಮ.ಅ.ನಿ ಬೆಂಗಳೂರು ಅನ್ನು ಸಂಪರ್ಕಿಸಬಹುದು ಎಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಣಬೆ ಬೇಸಾಯ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ
*ಬೆಂಗಳೂರು ನಗರ ಜಿಲ್ಲೆ ಆಕ್ಟೋಬರ್ 28 (ಕರ್ನಾಟಕ ವಾರ್ತೆ) ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಉದ್ಯೋಗ ಸಂಸ್ಥೆಯ ವತಿಯಿಂದ ಅಣಬೆ ಬೇಸಾಯ ಕುರಿತ 10 ದಿನಗಳ ಉಚಿತ ತರಬೇತಿಯನ್ನು ನವೆಂಬರ್ 12 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ನವಂಬರ್ 12 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು . ದೂರವಾಣಿ ಸಂಖ್ಯೆ : 6363139123, 9591514154, 9686248369, 9886935603 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿ: ಹೊರ ರಾಜ್ಯಗಳಿಂದ ಆಗಮಿಸುವ ಮಕ್ಕಳಿಗೆ ಮೂಲಸೌಕರ್ಯ ಕಲ್ಪಿಸಿ: ಡಿಡಿಪಿಐ ಜಯಪ್ರಕಾಶ್*
ಬೆಂಗಳೂರು : ಹೊರ ರಾಜ್ಯಗಳಿಂದ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಆಗಮಿಸುವ ಮಕ್ಕಳಿಗೆ ವಸತಿ, ಕುಡಿಯುವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಬೆಂಗಳೂರು ನಗರ ಜಿಲ್ಲೆಯ ಕೇಂದ್ರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಯಪ್ರಕಾಶ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ 70ನೇ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಯ ಪೂರ್ವಭಾವಿ ಸಿದ್ಧತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನವರಿ 5 ರಿಂದ 10ರವರೆಗೆ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಯು ಸರ್ಜಾಪುರ ರಸ್ತೆಯ ದೊಡ್ಡಕನ್ನಹಳ್ಳಿ ಸಮೀಪದ ಹೇಮಣ್ಣ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯಾವಳಿಯ ಯಶಸ್ವಿ ಆಯೋಜನೆಗೆ ವಿವಿಧ ಇಲಾಖೆಗಳ ಸಮನ್ವಯ ಅಗತ್ಯವಿದೆ ಎಂದು ತಿಳಿಸಿದರು.
ಹೊರ ರಾಜ್ಯಗಳಿಂದ ಪಂದ್ಯಾವಳಿಗೆ ಆಗಮಿಸುವ ಸುಮಾರು 1200 ಮಕ್ಕಳಿಗೆ ಕ್ರೀಡಾಂಗಣದಿಂದ ಸುಮಾರು 3ರಿಂದ 4 ಕಿ.ಮೀ. ವ್ಯಾಪ್ತಿಯಲ್ಲಿ ವಸತಿ ಹಾಗು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ 17 ವರ್ಷ ಒಳಪಟ್ಟ ಬಾಲಕ ಬಾಲಕಿಯರ ಒಟ್ಟು 88 ತಂಡಗಳು, (ಬಾಲಕರ 44 ಹಾಗೂ ಬಾಲಕಿಯರ 44) ಭಾಗವಹಿಸಲಿದೆ ಎಂದು ತಿಳಿಸಿದರು.
ಪಂದ್ಯಾವಳಿ ಸಂದರ್ಭದಲ್ಲಿ ಮಕ್ಕಳಿಗೆ ಪ್ರಥಮ ಚಿಕಿತ್ಸೆ, ಕುಡಿಯುವ ನೀರು, ಆಹಾರ, ಶೌಚಾಲಯ ಹಾಗೂ ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು ಅಲ್ಲದೆ ಬೆಸ್ಕಾಂ ಇಲಾಖೆ ವತಿಯಿಂದ ನಿರಂತರ ವಿದ್ಯುತ್ ಪೂರೈಕೆ ಮಾಡಲು ಕ್ರಮ ವಹಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪಂದ್ಯಾವಳಿ ನಡೆಯುವ ದಿನಗಳಂದು ಪ್ರತಿದಿನ ಸಂಜೆ ಒಂದು ಗಂಟೆಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು. ಪಂದ್ಯಾವಳಿಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಸೇರಿದಂತೆ ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಪೋಲಿಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಾಣಾಧಿಕಾರಿಗಳು ಹಾಗೂ ಇತರು ಉಪಸ್ಥಿತರಿದ್ದರು.

