HomeLatest Newsಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 348 ಅಧಿಕಾರಿಗಳ ನೇಮಕಾತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 348 ಅಧಿಕಾರಿಗಳ ನೇಮಕಾತಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 348 ಕೆಎಎಸ್ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರಿ ನೇಮಕಾತಿಯಲ್ಲಿ ಮೀಸಲು ಜಾರಿಗೆ ಸಂಬಂಧ ನಿಯಮ ಉಲ್ಲಂಘನೆಯಾಗಿದೆ ಎಂದು 348 ಕೆಎಎಸ್ ಅಧಿಕಾರಿಗಳ ನೇಮಕ ಕುರಿತ ಅಧಿಸೂಚನೆ ರದ್ದುಗೊಳಿಸಿದ ಕೆಎಟಿ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಕೆಎಎಸ್ ನೇಮಕ ಪ್ರಕ್ರಿಯೆ ಮುಂದುವರೆಸಲು ಸಮ್ಮತಿಸಿದೆ. ಇದರಿಂದಾಗಿ ಅತಂತ್ರಕ್ಕೆ ಸಿಲುಕಿದ ನೇಮಕಾತಿಯನ್ನು ಮತ್ತೆ ಮುಂದುವರಿಸಲು ಕೆ.ಪಿ.ಎಸ್.ಸಿ. ಗೆ ಹಸಿರು ನಿಶಾನೆ ದೊರೆತಂತಾಗಿದೆ.

ಮುಖ್ಯ ಪರೀಕ್ಷೆ ಬರೆದು ನೇಮಕಾತಿಗೆ ಕಾಯುತ್ತಿದ್ದ ಅಭ್ಯರ್ಥಿಗಳು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ. ಕಳೆದ ಮೇ 28ರಂದು ಕೆಎಟಿ ನೀಡಿದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್, ನ್ಯಾಯಮೂರ್ತಿ ವೆಂಕಟೇಶ ಟಿ. ನಾಯಕ್ ಅವರಿದ್ದ ವಿಭಾಗಿಯ ಪೀಠದಿಂದ ಈ ಮಧ್ಯಂತರ ಆದೇಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular