HomeKarnataka'KAS' ಪರೀಕ್ಷಾ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರಾಮುವಿವಿಯಿಂದ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನ

‘KAS’ ಪರೀಕ್ಷಾ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರಾಮುವಿವಿಯಿಂದ 30 ದಿನಗಳ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಿದೆ.

ಆಸಕ್ತರು ನವೆಂಬರ್ 16 ರ ಒಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರ ಒಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ 0821 2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಕೆ. ಬಿ. ಪ್ರವೀಣ ಅವರು ಪ್ರಕಟಣೆ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular