HomeKarnataka'KPSC' ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಇಂದು ಮತ್ತು ಫೆ.2 ರಂದು ಹೆಚ್ಚುವರಿ 'KSRTC' ಬಸ್...

‘KPSC’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಇಂದು ಮತ್ತು ಫೆ.2 ರಂದು ಹೆಚ್ಚುವರಿ ‘KSRTC’ ಬಸ್ ಸಂಚಾರ.!

ಬೆಂಗಳೂರು : ದಿನಾಂಕ 31.01.2025 ಮತ್ತು 02.02.2025 ರಂದು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಹೆಚ್ಚುವರಿ ಸಾರಿಗೆ ಬಸ್ ಗಳ ಸಂಚಾರದ ವ್ಯವಸ್ಥೆ ಮಾಡಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದಿನಾಂಕ 31.01.2025 ಮತ್ತು 02.02.2025 ರಂದು ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ಹುದ್ದೆಗೆ ಪರೀಕ್ಷೆ ನಡೆಸಲಿದ್ದು ಹೆಚ್ಚುವರಿ ಬಸ್ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನಿಯಮಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿರವರು ಕೋರಿರುತ್ತಾರೆ.

ಅದರಂತೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಅಡಚಣೆಯಾಗದಂತೆ ಸದರಿ ದಿನಗಳಂದು ವಿಭಾಗದವತಿಯಿಂದ ಪ್ರಮುಖ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ಥಾನ ಸ್ಥಳಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮಕೈಗೊಳ್ಳುವಂತೆ ಕೋರಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular