HomeKarnataka`KPTCL’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಿಎಂ ಅಸ್ತು

`KPTCL’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಿಎಂ ಅಸ್ತು

ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತಿ (KPTCL) ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 622 ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ.

ಶಕ್ತಿಭವನದಲ್ಲಿ ಶುಕ್ರವಾರ ನಡೆದ ನಿಗಮದ ನಿರ್ದೇಶಕರ ಆಡಳಿತ ಮಂಡಳಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೆಪಿಟಿಸಿಎಲ್ ಹುದ್ದೆಗಳ ಭರ್ತಿಗೆ ಒಪ್ಪಿಗೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೈಕೋರ್ಟ್ ನಿರ್ದೆಶನದಂತೆ 296 ಸಹಾಯಕ ಇಂಜಿನಿಯರ್, 208 ಕಿರಿಯ ಇಂಜಿನಿಯರ್, ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್ ವೈಸರ್ ಸೇರಿ 622 ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ನಡೆಸಲಾಗುತ್ತಿದೆ. 622 ಹುದ್ದೆಗಳ ಜೊತೆಗೆ ಖಾಲಿ ಇರುವ ಹುದ್ದೆಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಲು ಕ್ರಮಕೈಗೊಳ್ಳಬೇಕು ಎಂದು ಸಿಎಂ ಸೂಚನೆ  ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular