HomeLatest Newsವರ್ಗಾವಣೆ ನಿರೀಕ್ಷೆಯಲ್ಲಿರುವ ಕೆಎಸ್ಆರ್ಟಿಸಿ ನೌಕರರಿಗೆ ಗುಡ್ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿರುವ ಕೆಎಸ್ಆರ್ಟಿಸಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಕೆಎಸ್ಆರ್ಟಿಸಿ ನೌಕರರ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಮೂರು ಮತ್ತು ನಾಲ್ಕನೇ ದರ್ಜೆ ನೌಕರರ 2026 ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಂತಿಮ ದಿನವನ್ನು ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ.

ಪ್ರತಿವರ್ಷ ಕೆಎಸ್ಆರ್ಟಿಸಿಯಲ್ಲಿ ನೌಕರರ ಅನುಕೂಲಕ್ಕಾಗಿ ಅಂತರ ನಿಗಮ ವರ್ಗಾವಣೆ ಮಾಡಲಾಗುವುದು. ಅದರಂತೆ ಜನವರಿ 1ರಿಂದ 31 ರವರೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ವರ್ಗಾವಣೆ ಅಗತ್ಯವಿರುವ ನೌಕರರಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸುವ ಉದ್ದೇಶದೊಂದಿಗೆ ಅಂತಿಮ ದಿನವನ್ನು ಫೆಬ್ರವರಿ 28ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ. ವರ್ಗಾವಣೆ ಬಯಸುವ ನೌಕರರು ನಿಗಮದ ವೆಬ್ಸೈಟ್ www.ksrtc.org/transfer.com ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular