BIG NEWS : ರಾಜ್ಯ ಸರ್ಕಾರದಿಂದ ‘KSRTC’ ನೌಕರರಿಗೆ ಗುಡ್ ನ್ಯೂಸ್ : ನಗದು ರಹಿತ ‘ಚಿಕಿತ್ಸಾ ಭಾಗ್ಯ’ ಯೋಜನೆ ಜಾರಿ.!

ಬೆಂಗಳೂರು : ರಾಜ್ಯ ಸರ್ಕಾರ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು, ನಗದು ರಹಿತ ಚಿಕಿತ್ಸಾ ಭಾಗ್ಯ ಯೋಜನೆ ಜಾರಿಗೊಳಿಸಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗಾಗಿ ನಗದು ರಹಿತ ಆರೋಗ್ಯ ಸೇವೆ ಒದಗಿಸಲಾಗುತ್ತಿದ್ದು, ಈ ಸಂಬಂಧ ಈಗಾಗಲೇ 275 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ನೌಕರರು ತಾವು ಇರುವ ಊರಿನಲ್ಲೇ ಈ ಸೌಲಭ್ಯ ಪಡೆಯಬಹುದಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಆಸ್ಪತ್ರೆಗಳಿಗೆ ಸೌಲಭ್ಯವನ್ನು ವಿಸ್ತರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಏನೆಲ್ಲಾ ಸೌಲಭ್ಯ ಸಿಗಲಿದೆ..?

ಕೆಎಸ್‌ಆರ್‌ಟಿಸಿ ನೌಕರರಿಗೆ ಸರ್ಕಾರಿ, ಖಾಸಗಿ ಸೇರಿದಂತೆ 275 ಆಸ್ಪತ್ರೆಗಳಲ್ಲಿ ಆರೋಗ್ಯ ಕಾರ್ಡ್ ಬಳಸಿ ನಗದುರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ
– 34 ಸಾವಿರ ಸಿಬ್ಬಂದಿ, 1.50 ಲಕ್ಷ ಫಲಾನುಭವಿಗಳು
– ಕಣ್ಣು, ದಂತ ಚಿಕಿತ್ಸಾ ವೆಚ್ಚವೂ ಲಭ್ಯ
– ನೌಕರರ ಕುಟುಂಬಕ್ಕೂ ಆರೋಗ್ಯ ಕಾರ್ಡ್ ಬಳಸಿ ಚಿಕಿತ್ಸೆ ಸೌಲಭ್ಯ
– ಪ್ರತಿ ವರ್ಷ ರಾಜ್ಯ ಸರ್ಕಾರದಿಂದ 20 ಕೋಟಿ ರೂ. ಹಣ ಈ ಯೋಜನೆಗೆ ಮೀಸಲು

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read