HomeKarnatakaಗ್ರಂಥಾಲಯ ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಕನಿಷ್ಠ ವೇತನ ಜಾರಿಗೆ ಸರ್ಕಾರ ಆದೇಶ

ಗ್ರಂಥಾಲಯ ಮೇಲ್ವಿಚಾರಕರಿಗೆ ಗುಡ್ ನ್ಯೂಸ್: ಕನಿಷ್ಠ ವೇತನ ಜಾರಿಗೆ ಸರ್ಕಾರ ಆದೇಶ

ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಮೇಲ್ವಿಚಾರಕರಿಗೆ ಕಾರ್ಮಿಕ ಇಲಾಖೆ 2023ರಲ್ಲಿ ಪರಿಷ್ಕರಿಸಿರುವ ಕನಿಷ್ಠ ವೇತನ ನೀಡಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಂಥಾಲಯಗಳಲ್ಲಿ 206 ಮೇಲ್ವಿಚಾರಕರು, 100 ಕೊಳಚೆ ಪ್ರದೇಶಗಳ ಗ್ರಂಥಾಲಯ, 127 ಅಲೆಮಾರಿ, 31 ಸಮುದಾಯ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಿದ್ದಾರೆ. ಒಟ್ಟು 464 ಮೇಲ್ವಿಚಾರಕರಿಗೆ ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅದೇನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಕನಿಷ್ಠ ವೇತನ ನಿಗದಿ ಸಂಬಂಧ ಗ್ರಂಥಾಲಯ ಇಲಾಖೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಅದರ ಪ್ರಕಾರ ಮೇಲ್ವಿಚಾರಕರಿಗೆ 15,196 ರೂ. ಮಾಸಿಕ ಕನಿಷ್ಠ ವೇತನ ನಿಗದಿಪಡಿಸುವ ಜೊತೆಗೆ ಕಾಲಕಾಲಕ್ಕೆ ನಿಗದಿಪಡಿಸುವ ತುಟ್ಟಿಭತ್ಯೆ ವಿಸ್ತರಿಸುವುದು ಮತ್ತು ಕೆಲಸದ ಅವಧಿಯನ್ನು ಆರು ಗಂಟೆಯಿಂದ ಎಂಟು ಗಂಟೆಗೆ ಹೆಚ್ಚಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular