HomeLatest NewsGOOD NEWS : ರಾಜ್ಯದ ಸರ್ಕಾರಿ ಶಾಲೆಯ LKG -UKG ಮಕ್ಕಳಿಗೆ ಗುಡ್ ನ್ಯೂಸ್ :...

GOOD NEWS : ರಾಜ್ಯದ ಸರ್ಕಾರಿ ಶಾಲೆಯ LKG -UKG ಮಕ್ಕಳಿಗೆ ಗುಡ್ ನ್ಯೂಸ್ : ಬಿಸಿಯೂಟ ನೀಡಲು ಸರ್ಕಾರ ಆದೇಶ


ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಜನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ವಿವಿಧ ಯೋಜನೆಗಳಡಿ (ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ (ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ಶಾಲೆಗಳನ್ನು ಒಳಗೊಂಡಂತೆ, ಪಿ.ಎಂ ಶ್ರೀ ಯೋಜನೆಯಡಿ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಲಿಯ ವತಿಯಿಂದ ಮತ್ತು ಮ್ಯಾಗ್ನೆಟ್ ಶಾಲೆಗಳು ಸೇರಿದಂತೆ) ಈಗಾಗಲೇ 2018-19ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ: 111(i) ರಂತೆ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದಿನಾಂಕ:01-12-2025 ರಿಂದ ಅನ್ವಯವಾಗುವಂತೆ, ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಅನುಮತಿ ನೀಡಿ ಆದೇಶಿಸಿದೆ.

ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು, ನಿರ್ದೇಶಕರು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ, ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ನಿರ್ದೇಶಕರು (ಆಡಳಿತ), ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಾಲಿಸಬೇಕಾಗಿರುವ ಷರತ್ತುಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1) ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಕೆಳಕಂಡ ದಿನಗಳಲ್ಲಿ ಅನುಷ್ಠಾನ ಮಾಡತಕ್ಕದ್ದು ಹಾಗೂ ಸಂಬಂಧಿಸಿದ ವೆಚ್ಚವನ್ನು ಕೆಳಕಂಡ ಲೆಕ್ಕ ಶೀರ್ಷಿಕೆಗಳಡಿ ನಿಗದಿಯಾಗಿರುವ ಅನುದಾನದಿಂದ, ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭರಿಸತಕ್ಕದ್ದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular