HomeLatest NewsLPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ

LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ

ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ.

ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗದಿಪಡಿಸಿರುವಂತೆ

1. Up to 5 kms free (no charges)

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2. Beyond 5 kms for every round trip km- Rs.1.60 per cylinder (Rs. One Rupee sixty paise only)

ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೆÃರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಹಾಸನ ಕಾರ್ಯಾಲಯಕ್ಕೆ ಹಾಗೂ ಕಚೇರಿಯ ದೂರವಾಣಿ ಸಂಖ್ಯೆ 08172-268229 ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಲು ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular