HomeKarnatakaಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ನೀರಾವರಿ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳ ಸೌಲಭ್ಯ ಪಡೆಯಲಯ ಅರ್ಜಿ ಸಲ್ಲಿಸಬಹುದು.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು  ಪೋರ್ಟಲ್  ಮೂಲಕ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://kmmd.karnataka.gov.in ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22374832/ 8050770004/ 8050770005 ನ್ನು ಹಾಗೂ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular