HomeKarnatakaಮರಾಠ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಮರಾಠ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : 2023-24ನೇ ಸಾಲಿಗೆ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಹಾಗೂ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ.ಭೀಮೇಶ್ ಅವರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನವಾಗಿರುತ್ತದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).

ಅರ್ಹತೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬಂಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಿರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ).

ಯೋಜನೆಗಳು: ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು-ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಶೈಕ್ಷಣಿಕ ಸಾಲ ಯೋಜನೆಯಡಿ ಅರಿವು ಶೈಕ್ಷಣಿಕ ಸಾಲ ಯೋಜನೆಯ (ಹೊಸತು, ನವೀಕರಣ), ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (ಹೊಸತು, ನವೀಕರಣ), ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆ, ಇವುಗಳಡಿ ಸಾಲ ಸೌಲಭ್ಯ ಹಾಗೂ ಸಹಾಯಧನ ಒದಗಿಸಲಾಗುವುದು.

*ಸೂಚನೆ:

ಅರ್ಜಿಗಳನ್ನು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕವೇ ಸಲ್ಲಿಸಬೇಕು. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್ಲೈನ್ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಬಹುದಾಗಿರುತ್ತದೆ. ಅರ್ಜಿದಾರರು ಸರ್ಕಾರದ ಹಾಗೂ ನಿಗಮದ ನಿರ್ದೇಶಕ ಮಂಡಳಿಯು ಕಾಲಕಾಲಕ್ಕೆ ವಿಧಿಸುವ ಇನ್ನಿತರೆ ಅರ್ಹತೆ ಅಥವಾ ನಿಬಂಧನೆಗಳನ್ನು ಹೊಂದಿದವರಾಗಿರಬೇಕು.

ಮಾಹಿತಿಗಾಗಿ https://kmcdc.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಕುಮಾರಸ್ವಾಮಿ ದೇವಸ್ಥಾನದ ಎದುರಿನ ಕ್ಲಬ್ ರಸ್ತೆಯ ವೀರನಗೌಡ ಕಾಲೋನಿಯ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ(ನಿ)ದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ನಿಗಮದ ಸಹಾಯವಾಣಿ 8867537799, ದೂ.ಸಂ:080-29903994 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular