HomeLatest Newsಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ 6ನೇ ರೈಲು ಸಂಚಾರ ಆರಂಭ ಶೀಘ್ರ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ 6ನೇ ರೈಲು ಸಂಚಾರ ಆರಂಭ ಶೀಘ್ರ

ಹಳದಿ ಮಾರ್ಗದಲ್ಲಿ 6ನೇ ರೈಲು ಸೇರ್ಪಡೆಯೊಂದಿಗೆ ರೈಲುಗಳ ಮಧ್ಯಂತರ ಅವಧಿ 12 ರಿಂದ 13 ನಿಮಿಷಕ್ಕೆ ಇಳಿಕೆಯಾಗಲಿದೆ. ಪಶ್ಚಿಮ ಬಂಗಾಳದ ಟಿಟಾಗರ್ ರೈಲು ಸಿಸ್ಟಮ್ ನಿಂದ ಆರು ಬೋಗಿಗಳು ರವಾನೆಯಾಗಿದ್ದು, ಶೀಘ್ರವೇ ಹಬ್ಬಗೋಡಿ ಡಿಪೋಗೆ ಬರಲಿವೆ. ಡಿಸೆಂಬರ್ ಅಂತ್ಯದ ವೇಳೆಗೆ ಈ ರೈಲು ಸೇವೆ ಲಭ್ಯವಾಗಲಿದೆ.

19.5 ಕಿಲೋಮೀಟರ್ 15 ಕಿಲೋಮೀಟರ್ ಉದ್ದದ ಆರ್.ವಿ. ರಸ್ತೆ ಬೊಮ್ಮಸಂದ್ರ ಮೆಟ್ರೋ ಮಾರ್ಗದಲ್ಲಿ ಬೆಳಿಗ್ಗೆ 8ರಿಂದ ಮಧ್ಯಾಹ್ನದವರೆಗೆ ಸಂಜೆ 4 ರಿಂದ ರಾತ್ರಿ 9 ಗಂಟೆಯವರೆಗೆ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ. ಇನ್ನು ಎರಡು ರೈಲುಗಳು ಪೂರೈಕೆಯಾಗುವ ಸಾಧ್ಯತೆಯಿದ್ದು, ಹೊಸ ಎಂಟು ರೈಲುಗಳ ಸೇರ್ಪಡೆಯ ನಂತರ 10 ನಿಮಿಷಕ್ಕೊಂದು ರೈಲು ಸಂಚಾರ ಇರಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular