HomeLive Newsಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲು: ಮಾ. 1 ರಂದು...

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಯೆಲ್ಲೋ ಮಾರ್ಗದಲ್ಲಿ ನಾಳೆಯಿಂದ 8ನೇ ರೈಲು: ಮಾ. 1 ರಂದು ಮುಂಜಾನೆ 5 ಗಂಟೆಯಿಂದಲೇ ಮೆಟ್ರೋ ಸೇವೆ ಆರಂಭ

ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 8ನೇ ರೈಲು ಸೇರ್ಪಡೆಯಾಗಿದ್ದು, ಫೆಬ್ರವರಿ 27ರಿಂದ ಸೇವೆಗೆ ಲಭ್ಯವಾಗಿದೆ. ಸೋಮವಾರದಿಂದ ಶನಿವಾರದವರೆಗೆ ಪೀಕ್ ಅವಧಿಯಲ್ಲಿ 9 ನಿಮಿಷಕ್ಕೆ, ನಾನ್ ಪೀಕ್ ಅವಧಿಯಲ್ಲಿ 14 ನಿಮಿಷ ಅಂತರದಲ್ಲಿ ಮೆಟ್ರೋ ರೈಲುಗಳು ಸಂಚರಿಸಲಿವೆ.

ದಿನಾಂಕ 27ನೇ ಫೆಬ್ರವರಿ 2026 ರಿಂದ ಹಳದಿ ಮಾರ್ಗದಲ್ಲಿ 8ನೇ ರೈಲಿನ ಸೇರ್ಪಡೆ ಬಗ್ಗೆ ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ರಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಎಲ್ಲಾ ದಿನಗಳಲ್ಲಿ ಆರ್.ವಿ. ರಸ್ತೆ, ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ.

ಮಾರ್ಚ್ 1 ರಂದು ಮುಂಜಾನೆ 5 ಗಂಟೆಯಿಂದ ನಮ್ಮ ಮೆಟ್ರೋ ಸೇವೆ ಆರಂಭ

ಬೆಂಗಳೂರು ನಗರದಲ್ಲಿ ದಿನಾಂಕ 1ನೇ ಮಾರ್ಚ್, 2026(ಭಾನುವಾರ) ರಂದು ನಡೆಯಲಿರುವ ರಾಜ್ಯ ಮಟ್ಟದ ಪೊಲೀಸ್ ರನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಅನುಕೂಲವಾಗುವಂತೆ ಬಿಎಂಆರ್‌ಸಿಎಲ್, ನೇರಳೆ ಮಾರ್ಗದ ವೈಟ್‌ಫೀಲ್ಡ್ ಮತ್ತು ಚಲ್ಲಘಟ್ಟ ಹಸಿರು ಮಾರ್ಗದ ಮಾದಾವರ ಮತ್ತು ರೇಷ್ಮೆ ಸಂಸ್ಥೆ ಹಾಗೂ ಹಳದಿ ಮಾರ್ಗದ ಬೊಮ್ಮಸಂದ್ರ ಮತ್ತು ಆ‌ರ್.ವಿ. ರಸ್ತೆ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್‌ಗಳಿಂದ ದಿನಾಂಕ 01.03.2026 ರಂದು ಬೆಳಿಗ್ಗೆ 7 ಗಂಟೆ ಬದಲಾಗಿ ಮುಂಜಾನೆ 5 ಗಂಟೆಗೆ ಪ್ರಾರಂಭಿಸಲಿದೆ. ಸಾರ್ವಜನಿಕರು ಹಾಗೂ ಮೆಟ್ರೋ’ ಪ್ರಯಾಣಿಕರು ವಿಶೇಷ ವ್ಯವಸ್ಥೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular