HomeLatest Newsಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ರಿಯಾಯಿತಿಯಲ್ಲಿ ಆನ್ ಲೈನ್ ಟಿಕೆಟ್ ಸೌಲಭ್ಯ ಮತ್ತಷ್ಟು ಸುಲಭ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ರಿಯಾಯಿತಿಯಲ್ಲಿ ಆನ್ ಲೈನ್ ಟಿಕೆಟ್ ಸೌಲಭ್ಯ ಮತ್ತಷ್ಟು ಸುಲಭ

ಬೆಂಗಳೂರು: ಪ್ರಯಾಣಿಕರು ಸುಲಭವಾಗಿ ಟಿಕೆಟ್ ಪಡೆದುಕೊಳ್ಳುವ ಉದ್ದೇಶದಿಂದ ನಮ್ಮ ಮೆಟ್ರೋ ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್ ಮೂಲಕ ಟಿಕೆಟ್ ಸೌಲಭ್ಯ ಕಲ್ಪಿಸಿದೆ.

ಮೈಲ್ಸ್ ಅಂಡ್ ಕಿಲೋಮೀಟರ್ಸ್, ಟು ಮ್ಯಾಕ್, ಔಟ್ ಪಾಥ್, ರೆಡ್ ಬಸ್, ಹೈವೇ ಡಿ ಲೈಟ್ ಆ್ಯಪ್ ಗಳನ್ನು ಬಳಸಿಕೊಂಡು ಪ್ರಯಾಣಿಕರು ಮೆಟ್ರೋ ಟಿಕೆಟ್ ಗಳನ್ನು ಖರೀದಿಸಬಹುದಾಗಿದೆ. ಆನ್ಲೈನ್ ಬುಕಿಂಗ್ ಗೆ ವಿವಿಧ ಆ್ಯಪ್ ಗಳಲ್ಲಿ ಶೇಕಡ 10 ರಿಂದ 30 ರಷ್ಟು ರಿಯಾಯಿತಿ ಕೂಡ ನೀಡಲಾಗುತ್ತಿದೆ.

ಇದುವರೆಗೆ ವಾಟ್ಸಾಪ್ ಮತ್ತು ಪೇಟಿಎಂನಲ್ಲಿ ಮಾತ್ರ ಮೆಟ್ರೋ ಟಿಕೆಟ್ ಗಳನ್ನು ಪಡೆದುಕೊಳ್ಳಲು ಅವಕಾಶವಿದ್ದು, ಇತ್ತೀಚೆಗೆ ಆ ರೀತಿಯ ಟಿಕೆಟ್ ಖರೀದಿಸುವಲ್ಲಿ ಹಲವು ಸಮಸ್ಯೆಗಳು ಇರುವುದರಿಂದ ಸಾರ್ವಜನಿಕರಿಂದ ದೂರು ಕೇಳಿಬಂದಿದ್ದವು. ಈಗ ಇನ್ನೂ 5 ಆ್ಯಪ್ ಗಳಲ್ಲಿ ಟಿಕೆಟ್ ಪಡೆಯುವುದರಿಂದ ಆನ್ಲೈನ್ ಟಿಕೆಟ್ ಖರೀದಿ ಸಮಸ್ಯೆಗೆ ಪರಿಹಾರ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular