ರಾಜ್ಯದ ʻಹಾಲು ಉತ್ಪಾದಕರಿಗೆʼ ಗುಡ್ ನ್ಯೂಸ್ : ಶೀಘ್ರವೇ ʻಪ್ರೋತ್ಸಾಹ ಧನʼ 2  ರೂ ಹೆಚ್ಚಳ

ಬೆಳಗಾವಿ : ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ ಹಾಲಿಗೆ 2 ರೂಪಾಯಿ ಪ್ರೋತ್ಸಾಹಧ ನೀಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು,  ಕಚ್ಚಾ ಪದಾರ್ಥಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪಶು ಆಹಾರ ದರವನ್ನು ಪ್ರತಿ ಕೆ.ಜಿ ಗೆ 1 ರೂಪಾಯಿ ಹೆಚ್ಚಿಸಲಾಗಿದೆ. ಈ ದರವನ್ನು ಇಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಅಲ್ಲದೇ ಮುಂದಿನ ದಿನಗಳಲ್ಲಿ ರೈತರಿಗೆ ನೀಡುತ್ತಿರುವ ಹಾಲಿನ ಪ್ರೋತ್ಸಾಹ ದರವನ್ನು ರೂ.2 ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಹೈನುಗಾರಿಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೈಗೊಳ್ಳಲಾದ ₹5 ಪ್ರೋತ್ಸಾಹ ಧನದಿಂದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಗೆ ಅನುಕೂಲವಾಗುತ್ತಿದೆ. ಮುಂದಿನ ದಿನಗಳಲ್ಲಿ  ರೈತರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ₹ 2 ಹೆಚ್ಚಿಸಲಾಗುವುದಾಗಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read