HomeLive Newsಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: 15 ಲಕ್ಷ ರೂ. ವರೆಗೆ ಸಾಲ

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್: 15 ಲಕ್ಷ ರೂ. ವರೆಗೆ ಸಾಲ

ಬೆಂಗಳೂರು: ಹಾಲು ಉತ್ಪಾದಕ ರೈತರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ಹೆಚ್ಚಿನ ಹಾಲು ಉತ್ಪಾದನೆ, ದೊಡ್ಡ ಮಟ್ಟದಲ್ಲಿ ಹಸು ಸಾಕಾಣಿಕೆಗೆ ನೆರವು ನೀಡಲು ಬೆಂಗಳೂರು ಡೈರಿ ವತಿಯಿಂದ ಬೃಹತ್ ಸಾಲ ಮೇಳ ಆಯೋಜಿಸಲಾಗುವುದು ಎಂದು ಒಕ್ಕೂಟದ ನಿರ್ದೇಶಕ ಸತೀಶ್ ಕಡತನಮಲೆ ಹೇಳಿದ್ದಾರೆ.

ಯಲಹಂಕ ಕ್ಷೇತ್ರದ ಬೈರಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಮೊದಲ ಮಹಡಿ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜಾನುಕುಂಟೆ ಶಿಬಿರ ಕಚೇರಿ ಆವರಣದಲ್ಲಿ ಬೃಹತ್ ಸಾಲ ಮೇಳ ಆಯೋಜಿಸಿ 15 ಲಕ್ಷ ರೂಪಾಯಿವರೆಗೆ ಸಾಲ ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ದೊಡ್ಡ ಮಟ್ಟದಲ್ಲಿ ಹಸು ಸಾಕಾಣಿಕೆ, ಹೆಚ್ಚಿನ ಹಾಲು ಉತ್ಪಾದನೆಗೆ ಒತ್ತು ನೀಡಲು ಬೆಂಗಳೂರು ಡೈರಿ ಹಾಲು ಉತ್ಪಾದಕರಿಗೆ ವರ್ಷಕ್ಕೆ ಶೇಕಡ ಮೂರರಷ್ಟು ಬಡ್ಡಿ ದರದಲ್ಲಿ 15 ಲಕ್ಷ ರೂ. ಸಾಲ ನೀಡುವ ವಿನೂತನ ಯೋಜನೆ ಅನುಷ್ಠಾನಕ್ಕೆ ಮುಂದಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular