HomeKarnatakaಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗ ಯೋಜನೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : ಸ್ವಯಂ ಉದ್ಯೋಗ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಮುಂತಾದ ಚಟುವಟಿಕೆಗಳನ್ನು ಪ್ರಾರಂಭಿಸಲು ಸಾಲ ಮತ್ತು ಸಹಾಯಧನ ಒದಗಿಸಲಾಗುವುದು. ಘಟಕ ವೆಚ್ಚ ಶೇ.33 ಅಥವಾ ಗರಿಷ್ಠ ಮಿತಿ ರೂ.1 ಲಕ್ಷದ ಸಹಾಯಧನ ನೀಡಲಾಗುವುದು ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ನಿಗಮದ ವೆಬ್‍ಸೈಟ್: https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular