ರಾಜ್ಯದ ಅಲ್ಪಸಂಖ್ಯಾತ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : ʻಸಾಂತ್ವನ ಯೋಜನೆʼಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ಸಾಂತ್ವನ ಯೋಜನೆಯಡಿ ಪ್ರಯೋಜನೆ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯದ ವಿಶೇಷ ಹಾಗೂ ದುರ್ಬಲ ವರ್ಗದ ಫಲಾನುಭವಿಗಳಿಗೆ ಗರಿಷ್ಠ ರೂ.5.00 ಲಕ್ಷಗಳ ಘಟಕ ವೆಚ್ಚಕ್ಕೆ ಶೇ.50ರಷ್ಟು ಸಹಾಯಧನ ಮತ್ತು ಶೇ.3ರ ಬಡ್ಡಿ ದರದಲ್ಲಿ ಶೇ.50ರಷ್ಟು ಸಾಲವನ್ನು ನೀಡಲಾಗುವುದು.

ಕೋಮು ಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗಳೊಗಳಾದ ಪ್ರಕರಣಗಳಲ್ಲಿ ಕನಿಷ್ಠ ರೂ.2.00 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು. ಅರ್ಹತೆ ಹಾಗೂ ಅಗತ್ಯ ದಾಖಲಾತಿಗಳನ್ನು ಆನ್‍ಲೈನ್‍ನಲ್ಲಿ ತಿಳಿಸಿದಂತೆ ಸಲ್ಲಿಸಬೇಕು.

ಅರ್ಜಿ ಹಾಕಲು ಬಯಸುವರು https://kmdconline.karnataka.gov.in  ರಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read