ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಸಿಖ್ಖಲಿಗಾರ್ ಸಮುದಾಯದ ಅಭಿವೃದ್ಧಿ ಯೋಜನೆ ಹಾಗೂ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಉತ್ತೇಜನ (ಸಹಾಯಧನ ಯೋಜನೆ) ಯೋಜನೆಯ ಸಾಲ ಹಾಗೂ ಸಹಾಯಧನ ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್ಸೈಟ್: https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಸಿದ ನಂತರ ಸೂಕ್ತ ದಾಖಲಾತಿಗಳ ಪ್ರತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-201449 ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು. “ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 30 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read