ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ : ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಪ್ರತಿ ವರ್ಷದಂತೆ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಅನುಷ್ಠಾನಗೊಳಿಸುತ್ತಿರುವ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳು:

ಶ್ರಮಶಕ್ತಿ ಸಾಲದ ಯೋಜನೆ: ಈ ಯೋಜನೆಯಲ್ಲಿ ರೂ.50 ಸಾವಿರಗಳ ಒಳಗೆ ಶೇ.4ರಷ್ಟು ಬಡ್ಡಿ ದರದಲ್ಲಿ ಶೇ.50 ಸಾಲ ಹಾಗೂ ಶೇ.50 ಸಹಾಯಧನ ನೀಡಲಾಗುವುದು.ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ: ಈ ಯೋಜನೆಯಲ್ಲಿ ಸಮುದಾಯದ ವಿಧವೆ, ವಿಚ್ಛೇದಿತೆ, ಅವಿವಾಹಿತ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲು ರೂ.50 ಸಾವಿರ ಒಳಗೆ ಶೇ.4ರಷ್ಟು ಬಡ್ಡಿ ದರದಲ್ಲಿ ಶೇ.50 ಸಾಲ ಹಾಗೂ ಶೇ.50 ಸಹಾಯಧನ ನೀಡಲಾಗುವುದು.

ಅರಿವು ಯೋಜನೆ: ಈ ಯೋಜನೆಯಲ್ಲಿ ವೃತ್ತಿಪರ ಕೋರ್ಸ್ ಮಾಡಬಯಸುವ ಅಲ್ಪಸಂಖ್ಯಾತ ವಿಧ್ಯಾರ್ಥಿಗಳಿಗೆ ವ್ಯಾಸಂಗ ಪೂರ್ಣಗೊಳಿಸುವವರೆಗೆ ಪ್ರತಿ ವರ್ಷ ರೂ.50 ಸಾವಿರದಿಂದ ರೂ.3 ಲಕ್ಷದವರೆಗೆ ಸಾಲ ವ್ಯಾಸಂಗ ಪೂರ್ಣಗೊಳಿಸಿದ 6 ತಿಂಗಳ ನಂತರ ಶೇ.2ರ ಸೇವಾ ಶುಲ್ಕದೊಂದಿಗೆ ಸಾಲ ಮರುಪಾವತಿ ಮಾಡಲು ಅವಕಾಶ ಇರುತ್ತದೆ.

ತರಬೇತಿ ಯೋಜನೆ: ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ/ಕಚೇರಿ, ಕಂಪನಿ, ಉದ್ದಿಮೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ ಭಾರಿ ವಾಹನ ಚಾಲನೆ, ಶಾರ್ಟ್ ಹ್ಯಾಂಡ್, ಸೆಕ್ಯುರಿಟಿ ಸರ್ವಿಸ್ಸ್, ಬ್ಯೂಟಿ ಪಾರ್ಲರ್ (ಪುರಷರಿಗೆ ಮತ್ತು ಮಹಿಳೆಯರಿಗೆ) ಕೋರ್ಸ್ಗಳಿಗೆ ನಿಗಮದಿಂದ ತರಬೇತಿ ನೀಡಲಾಗುವುದು.

ಸ್ವಾವಲಂಬಿ ಸಾರಥಿ ಯೋಜನೆ: ಈ ಯೋಜನೆಯಲ್ಲಿ ಟ್ಯಾಕ್ಸಿ/ಗೂಡ್ಸ್ ವಾಹನ/ಪ್ಯಾಸೆಂಜರ್ ಆಟೋರಿಕ್ಷಾ ಖರೀದಿಸಲು ಫಲಾನುಭವಿಗಳಿಗೆ ಬ್ಯಾಂಕ್ನಿಂದ ಸಾಲ ಮಂಜೂರಾತಿಯಾಗಿದ್ದಲ್ಲಿ, ನಿಗಮದಿಂದ ವಾಹನದ ಮೌಲ್ಯದ ಶೇ.50ರಷ್ಟು ಸಹಾಯಧನ ಗರಿಷ್ಠ ರೂ.3 ಲಕ್ಷ ನೀಡಲಾಗುವುದು.

ಗಂಗಾಕಲ್ಯಾಣ ಯೋಜನೆ: ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಕೊಳವೆಬಾವಿ ಕೊರೆಯಲು, ಪಂಪು ಅಳವಡಿಕೆ ಹಾಗೂ ನೀರಾವರಿ ವಿದ್ಯುದೀಕರಣಕ್ಕೆ ಸಂಪೂರ್ಣ ಸಹಾಯಧನ ಒದಗಿಸಲಾಗುವುದು.

ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ: ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ವಿಧ್ಯಾಭ್ಯಾಸ ಪಡೆಯಲು ರೂ.20 ಲಕ್ಷದವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು.

ವೃತ್ತಿ ಪ್ರೋತ್ಸಾಹ ಯೋಜನೆ: ಅಲ್ಪಸಂಖ್ಯಾತರ ಸಮುದಾಯದ ಜನರಿಗೆ, ಹಣ್ಣು, ಹಂಪಲು, ಕೋಳಿ ಮತ್ತು ಮೀನು ಮಾರಾಟ, ಏಳನೀರು, ಕಬ್ಬೀನ ಹಾಲು, ತಂಪು ಪಾನೀಯ ಮಾರಾಟ, ಬೇಕರಿ, ಲ್ಯಾಂಡರಿ, ಡ್ರೈ ಕ್ಲೀನಿಂಗ್, ಹೇರ್ ಡ್ರೈಸಿಂಗ್ ಸಲೂನ್, ಬ್ಯೂಟಿ ಪಾರ್ಲರ್, ವಾಟರ್ ವಾಶ್, ಪಂಕ್ಚರ್, ಮೆಕಾನಿಕ್ ಶಾಪ್, ದ್ವಿಚಕ್ರ, ತ್ರಿಚಕ್ರ ವಾಹನ ರಿಪೇರಿ, ಬಿದರಿ ವೇರ್ ಕೆಲಸ, ರೇಷ್ಮೆ ರೀಲಿಂಗ್ ಮತ್ತು ಟ್ವಸ್ಟಿಂಗ್, ಆಟಿಕೆ ಗೊಂಬೆ ತಯಾರಿಕೆ ಇತ್ಯಾದಿ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿ ಪಡಿಸಲು ನಿಗಮದಿಂದ ಶೇ.50 ಸಹಾಯಧನದೊಂದಿಗೆ ರೂ.1 ಲಕ್ಷ ಸಾಲ ನೀಡಲಾಗುವುದು.

*ಅರ್ಹತೆಗಳು: ಅರ್ಜಿದಾರರು ಜಿಲ್ಲೆಯ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.4.50 ಲಕ್ಷ ಮೀರಬಾರದು. ಅರ್ಜಿದಾರರು ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಹೊಂದಿರಬೇಕು. ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿ ಇರುತ್ತದೆ. ಶೇ.3ರಷ್ಟು ಅಂಗವಿಕಲರಿಗೆ ಮೀಸಲಾತಿ ಇರುತ್ತದೆ.

ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ 2 ಭಾವಚಿತ್ರ ಸಲ್ಲಿಸಬೇಕು.

ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಅರ್ಜಿದಾರರು ಕಡ್ಡಾಯವಾಗಿ ಐಎಫ್ಎಸ್ಸಿ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಬೇಕು.ಅರ್ಜಿಗಳನ್ನು ಆನ್ಲೈನ್ ವೆಬ್ಸೈಟ್ https://kmdconline.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಸೆ.25 ಆಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಚೇರಿಗೆ ಸೆ.27 ರೊಳಗಾಗಿ ಸಲ್ಲಿಸಬೇಕಾಗಿರುತ್ತದೆ. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್ಮೆಂಟ್ನ ವಿಜಯನಗರ ಕಾಲೋನಿಯ ಹಳೇ ಮಾರುಕಟ್ಟೆ ರಸ್ತೆಯ ನಳಂದ ಕಾಲೇಜ್ ಪಕ್ಕದಲ್ಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ನಿ) ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಮೊ.8277944207 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read