HomeKarnatakaಅಲ್ಪಸಂಖ್ಯಾತ ಸಮುದಾಯಕ್ಕೆ ಸಿಹಿಸುದ್ದಿ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಹಿಸುದ್ದಿ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿನ ಸ್ವಾವಲಂಭಿ ಸಾರಥಿ ಯೋಜನೆ, ಶ್ರಮಶಕ್ತಿ ಸಾಲದ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ), ಸಮುದಾಯ ಆಧಾರಿತ ತರಬೇತಿ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಮತ್ತಿಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ವೆಬ್ ಸೈಟ್ https://kmdconline.karnataka.gov.in ಮೂಲಕ ಸೆಪ್ಟಂಬರ್ 25 ರೊಳಗೆ ಸಲ್ಲಿಸಬೇಕು. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)., ಜಿಲ್ಲಾ ವ್ಯಾವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ , ದಕ್ಷಿಣ ವಿಭಾಗ, ಹಮೀದ್ ಷಾ ಕಾಂಪ್ಲೆಕ್ಸ್, 2 ನೇ ಮಹಡಿ, ಎಸ್.ಎಫ್.2, ಹಲಸೂರು ಗೇಟ್ ಪೊಲೀಸ್ ಠಾಣೆ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆ -02 ಇಲ್ಲಿ ಸಲ್ಲಿಸಬಹುದು
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22114817 ಅಥವಾ ಸಹಾಯವಾಣಿ ಸಂಖ್ಯೆ: 8277799990 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ದಕ್ಷಿಣ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular