‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವೃತ್ತಿಪರ ತರಬೇತಿ ಪಡೆಯಲು ಆನ್’ಲೈನ್ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್, ಬೆಂಗಳೂರು ಇಲ್ಲಿ 18 ರಿಂದ 35 ವರ್ಷ ವಯೋಮಿತಿಯುಳ್ಳ, ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಲ್ಟಿ ಕುಸಿನ್ ಕುಕ್ (5 ತಿಂಗಳು), ಎಪ್ &ಡಿ ಸರ್ವಿಸ್ (4 ತಿಂಗಳು) ಹಾಗೂ ಎಂಟರ್‌ಪ್ರನೂರ್‌ಶಿಪ್ ಪ್ರೋಗ್ರಾಂ (1 ತಿಂಗಳು) ವೃತ್ತಿಪರ ತರಬೇತಿ ನೀಡಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಸಮುದಾಯಗಳಿಗೆ ಸೇರಿದವಾಗಿದ್ದು, ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ವಿದ್ಯಾರ್ಥಿಯು 10 ನೇ ತರಗತಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆಸಕ್ತರು https://sevasindhuservices.karnataka.gov.in ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಆಗಸ್ಟ್ 02 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read