HomeKarnatakaಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯುಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡುತ್ತಿದೆ. ಪದವಿ ಪೂರ್ವ, ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಕೆ.ಎಸ್.ಒ.ಯು. ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಶುಲ್ಕ ಪಾವತಿ ಸೌಲಭ್ಯದಡಿ ಕರಾಮುವಿಯ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ(General & I.T)  ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಸೇರ ಬಯಸುವ ಅಲ್ಪಸಂಖ್ಯಾತ ವರ್ಗದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬುದಿಸ್ಟ್ ಮತ್ತು ಪಾರ್ಸಿ) ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಂತರ್ಜಾಲ https://dom.karnataka.gov.in ದಲ್ಲಿರುವ ಕರಾಮುವಿಯ ಪ್ರವೇಶಾತಿ ಪೋರ್ಟಲ್ ಲಿಂಕ್ https://minority.ksouportal.com ಮೂಲಕ ಆನ್‍ಲೈನ್‍ನಲ್ಲಿ ಜುಲೈ 31, 2026 ರೊಳಗಾಗಿ ಅರ್ಜಿ ಸಲ್ಲಿಸಿ, ನೇರವಾಗಿ ಅಗತ್ಯ ದಾಖಲಾತಿಗಳೊಂದಿಗೆ ಧಾರವಾಡದಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿ ಪಡೆಯಬಹುದು. ಅರ್ಹ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯೇ ಪೂರ್ಣ ಪ್ರವೇಶಾತಿ ಶುಲ್ಕ ಭರಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಪ್ರಾದೇಶಿಕ ಕೇಂದ್ರ ಧಾರವಾಡ, ಅಮರಗೋಳ 2ನೇ ಹಂತ, ಜಡ್ಜ್ ಕಾಲೋನಿ ಹತ್ತಿರ, ನವನಗರ, ಹುಬ್ಬಳ್ಳಿ., ದೂರವಾಣಿ ಸಂಖ್ಯೆ: 0836-2441199 ಅಥವಾ 7019314679 ಗೆ ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ.ಲೋಕೇಶ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular