ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `IAS,KAS’ ಪರೀಕ್ಷೆಗಳಿಗೆ `ವಸತಿ ಸಹಿತ’ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ  ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಬೆಂಗಳೂರಿನಲ್ಲಿರುವ ಕರ್ನಾಟಕ ಹಜ್ ಭವನದಲ್ಲಿ ನಡೆಯಲಿರುವ 2023-24ನೇ ಸಾಲಿನಲ್ಲಿ ಐ.ಎ.ಎಸ್ /ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು,

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್,ಜೈನ, ಬೌದ್ಧ, ಸಿಖ್, ಪಾರ್ಸಿ),

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು.

ಈಗಾಗಲೇ ಇಲಾಖೆ/ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು,

ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಪ್ರಾರಂಭ ದಿನಾಂಕ

ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ಪಾರಂಭ ದಿನಾಂಕ: 06.09.2023

ಕೂನೆಯ ದಿನಾಂಕ

ಅನ್‌ಲೈನ್ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 16.09.2023

ಅರ್ಜಿದಾರರಿಗೆ ಸೂಚನೆಗಳು

edrodd: https://sevasindhu.karnataka.gov.in https://dom.karnataka.gov.in ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ ಲೈನ್ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ ವಿಧಾನಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAOS) ಇಲ್ಲಿ ಲಭ್ಯ https://dom.karnataka.gov.in. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8722290990 ಇವರನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read