HomeKarnatakaರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಶುಲ್ಕ ಮರುಪಾವತಿʼ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಶುಲ್ಕ ಮರುಪಾವತಿʼ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್‍ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular