HomeKarnatakaವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

ಬೆಂಗಳೂರು: ರಾಜ್ಯವ್ಯಾಪಿ ಸಂಚಾರ ನಿಯಮ ಉಲ್ಲಂಘನೆಯ ಹಳೆಯ ಪ್ರಕರಣಗಳಿಗೆ ದಂಡ ಪಾವತಿಸಲು ಮತ್ತೆ ಶೇಕಡ 50ರಷ್ಟು ರಿಯಾಯಿತಿ ನೀಡಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಜೂನ್ 21ರಿಂದ ಜುಲೈ 10ರವರೆಗೆ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. 2026ರ ಮೇ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ- ಚಲನ್ ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತು ಸಾರಿಗೆ ಇಲಾಖೆಯಲ್ಲಿ 1991 ರಿಂದ 2022ರ ಅವಧಿಯಲ್ಲಿ ದಾಖಲಾಗಿ ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡ 50ರಷ್ಟು ರಿಯಾಯಿತಿ ನೀಡಲಾಗಿದೆ.

ಎಲ್ಲಾ ಸಂಚಾರ ಪೊಲೀಸ್ ಠಾಣೆಗಳು, ಬೆಂಗಳೂರು ನಗರ ಸಂಚಾರ ನಿರ್ವಹಣಾ ಕೇಂದ್ರಗಳಲ್ಲಿ ದಂಡ ಪಾವತಿಸಬಹುದು. ಆನ್ಲೈನ್ ಮೂಲಕವೂ ಸಹ ಹಳೆ ಪ್ರಕರಣಗಳ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಇದೆ. ಕರ್ನಾಟಕ ಒನ್, ಕೆ.ಎಸ್.ಪಿ.ಎಸ್. ಆ್ಯಪ್ ಮೂಲಕ ಕೂಡ ದಂಡ ಪಾವತಿಸಬಹುದಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular