ನವದೆಹಲಿ: ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ಇನ್ನೊಂದು ವರ್ಷದಲ್ಲಿ ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಹೆದ್ದಾರಿಗಳಲ್ಲಿ ವಾಹನ ಸವಾರರಿಗೆ ಅಡೆತಡೆ ಇಲ್ಲದೆ ಪ್ರಯಾಣಕ್ಕೆ ಅವಕಾಶ ಖಾತರಿಪಡಿಸುವುದು ಇದರ ಉದ್ದೇಶವಾಗಿದೆ. ಹತ್ತು ಸ್ಥಳಗಳಲ್ಲಿ ಪ್ರಾಯೋಗಿಕವಾಗಿ ಹೊಸ ತಡೆರಹಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸಲಾಗಿದೆ. ವರ್ಷದೊಳಗೆ ಇಡೀ ದೇಶಕ್ಕೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಈಗಿರುವ ಟೋಲ್ ವ್ಯವಸ್ಥೆ ಕೊನೆಯಾಗಲಿದೆ, ಯಾರೂ ವಾಹನ ತಡೆಯುವುದಿಲ್ಲ. ಎಲೆಕ್ಟ್ರಾನಿಕ್ ಸುಂಕ ಸಂಗ್ರಹ ವ್ಯವಸ್ಥೆಯನ್ನು ದೇಶಾದ್ಯಂತ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
