BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಜಸ್ಟ್ 30 ಸೆಕೆಂಡ್ ಒಳಗೆ ಸಿಗುತ್ತೆ ‘QR ಟಿಕೆಟ್’

ಬೆಂಗಳೂರು : ಮೆಟ್ರೋ ಟಿಕೆಟ್ಗಳನ್ನು ತ್ವರಿತವಾಗಿ ಮತ್ತು ಸಂಪರ್ಕರಹಿತವಾಗಿ ವಿತರಿಸಲು ಅನುಕೂಲವಾಗುವಂತೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 10 ಸ್ವಯಂ ಸೇವಾ ಟಿಕೆಟ್ ಯಂತ್ರಗಳನ್ನು ಸ್ಥಾಪಿಸಲಾಗಿದೆ.

ಪ್ರಯಾಣಿಕರು 30 ಸೆಕೆಂಡ್ಗಳಿಗಿಂತ ಕಡಿಮೆ ಅವಧಿಯಲ್ಲಿ ಟಿಕೆಟ್ ಪಡೆಯಬಹುದು. ಪ್ರಯಾಣಿಕರು ಡ್ರಾಪ್-ಡೌನ್ ಮೆನು ಅಥವಾ ನಕ್ಷೆಯನ್ನು ಉಪಯೋಗಿಸಿ ತಲುಪಬೇಕಾದ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಪ್ರಯಾಣಿಕರ ಸಂಖ್ಯೆಯನ್ನು ನಮೂದಿಸಿ, ಪ್ರಯಾಣ ದರ ಪರಿಶೀಲಿಸಬೇಕು. ಯಾವುದೇ ಯುಪಿಐ ಆಧಾರಿತ ಮೊಬೈಲ್ ಆಪ್ಗಳ ಮೂಲಕ ದರ ಪಾವತಿ ಮಾಡಬಹುದು. ಪಾವತಿ ಪೂರ್ಣಗೊಂಡ ಕೂಡಲೇ ಪೇಪರ್ ಕ್ಯೂಆರ್ ಟಿಕೆಟ್ ಲಭ್ಯವಾಗುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read