‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇಂದಿನಿಂದ ನಾಗಸಂದ್ರ-ಮಾದಾವರ ಸಂಚಾರ ಆರಂಭ

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ  ಗುಡ್ ನ್ಯೂಸ್   ಸಿಕ್ಕಿದ್ದು, ಇಂದಿನಿಂದ ನಾಗಸಂದ್ರ-ಮಾದಾವರ ಸಂಚಾರ ಆರಂಭವಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು ರೇಷ್ಮೆ ಸಂಸ್ಥೆಯಿಂದ ನಾಗಸಂದ್ರವರೆಗೆ ಇದ್ದ ಹಸಿರು ಮಾರ್ಗವನ್ನು ಮಾದಾವರವರೆಗೆ 3.7 ಕಿಲೋ ಮೀಟರ್ ವರೆಗೆ ಒಟ್ಟು 298 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದೆ.2019ರಲ್ಲಿಯೇ ಕಾಮಗಾರಿ ಆರಂಭಿಸಿದ್ದ ಈ ವಿಸ್ತರಣೆ ಮಾರ್ಗದಲ್ಲಿ ಕೆಲಸ ಪೂರ್ಣಗೊಳ್ಳುವುದು ವಿಳಂಬವಾಯಿತು

ಯಾವುದೇ ಉದ್ಘಾಟನಾ ಕಾರ್ಯಕ್ರಮ ಇಲ್ಲದೇ ನೇರವಾಗಿ ರೈಲು ಸಂಚಾರ ಆರಂಭಿಸಲಾಯಿತು. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೆಲವು ದಿನಗಳ ಹಿಂದೆ ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭಿಸುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಚಿವ ಮನೋಹರ್ ಲಾಲ್ ಕಟ್ಟರ್ಗೆ ಪತ್ರವನ್ನು ಬರೆದಿದ್ದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read