NHM ಆರೋಗ್ಯ ಸಿಬ್ಬಂದಿಗೆ ಸಿಹಿ ಸುದ್ದಿ: ವೈದ್ಯರು, ಸ್ಟಾಫ್ ನರ್ಸ್ ಗಳ ವೇತನ ಹೆಚ್ಚಳ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್(ಎನ್.ಹೆಚ್.ಎಂ.) ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ತಜ್ಞವೈದ್ಯರು ಮತ್ತು ಸ್ಟಾಫ್ ನರ್ಸ್ ಗಳ ವೇತನ ಪರಿಷ್ಕರಣೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

NHM ಯೋಜನೆಯಡಿ ಕಾರ್ಯ ನಿರ್ವಹಿಸುವ ವೈದ್ಯರು, ತಜ್ಞ ವೈದ್ಯರು, ನವಜಾತ ಶಿಶು ಆರೈಕೆ ಘಟಕ ಮತ್ತು ತೀವ್ರ ನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುವ ಸ್ಟಾಫ್ ನರ್ಸ್ ಗಳ ವೇತನ ಕಡಿಮೆ ಇರುವ ಕಾರಣ ಅನೇಕ ಹುದ್ದೆಗಳು ಖಾಲಿ ಉಳಿದಿವೆ. ಹೀಗಾಗಿ ವೇತನ ಪರಿಷ್ಕರಿಸಿ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದ್ದಾರೆ.

NHM ಯೋಜನೆಯಡಿ ಎಂಬಿಬಿಎಸ್ ವೈದ್ಯರಿಗೆ ಪ್ರಸ್ತುತ 46,895 ರೂ.ನಿಂದ 50,000 ರೂ. ನೀಡುತ್ತಿದ್ದು, ಇದನ್ನು 60 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ತಜ್ಞ ವೈದ್ಯರಿಗೆ 1.10 ಲಕ್ಷ ರೂ.ನಿಂದ 1.30 ಲಕ್ಷ ರೂ. ನೀಡುತ್ತಿದ್ದು, ಇದನ್ನು 1.40 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಇವರಿಗೆ ಪ್ರತಿ ವರ್ಷ ಅನುಭವಕ್ಕೆ ಶೇಕಡ 2.5 ರಷ್ಟು ವೇತನ ಹೆಚ್ಚಳ ಮಾಡಲಾಗುವುದು. ಸ್ಟಾಫ್ ನರ್ಸ್ ಗಳ ಪ್ರಸ್ತುತ ವೇತನ 14,186 ರಿಂದ 18,774 ರೂ. ಇದ್ದು, ಇದನ್ನು 22 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ ಮಾತ್ರ ಪರಿಷ್ಕೃತ ವೇತನ ಅನ್ವಯವಾಗಲಿದೆ. ಪ್ರಸ್ತುತ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಈಗ ಪಡೆಯುತ್ತಿರುವ ವೇತನ ಮುಂದುವರೆಯಲಿದೆ. ಈ ನೌಕರರು ರಾಜೀನಾಮೆ ನೀಡಿ ಹೊಸ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಹೊಸ ನೇಮಕಾತಿಯ ಸಂದರ್ಭದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಅನುಭವದ ಆಧಾರದ ಮೇಲೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read