HomeKarnatakaಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ...

ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ರಾಜ್ಯ ಸರ್ಕಾರ/ನಿಗಮದ ಯೋಜನೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  1. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ
  2. ಅರಿವು ಶೈಕ್ಷಣಿಕ ಸಾಲ ಯೋಜನೆ
  3. ಗಂಗಾ ನೀರಾವರಿ ಕಲ್ಯಾಣ ಯೋಜನೆ

ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು. 4. ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‍ಗಳ ಸಹಯೋಗದೊಂದಿಗೆ), 5. ಸ್ವಾವಲಂಬಿ ಸಾರಥಿ ಯೋಜನೆ, 6. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು  ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kaad.karnataka.gov.in ಭೇಟಿ ನೀಡಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular