ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಅಲೆಮಾರಿ/ ಅರೆ ಅಲೆಮಾರಿ ಜನಾಂಗವದರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ:- 01 ರಿಂದ 08ನೇ ತರಗತಿಯವರೆಗೆ ರೂ.2000 ಮತ್ತು 09 ರಿಂದ 10 ತರಗತಿಯವರೆಗೆ ರೂ.4000 ರೂಗಳನ್ನು ವಾರ್ಷಿಕವಾರು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿ ವೇತನ ಮೊತ್ತವನ್ನು ಜಮಾ ಮಾಡಲಾಗುವುದು. ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷಗಳು ಮಿತಿಯೊಳಗಿರಬೇಕು. ವಿದ್ಯಾರ್ಥಿಯು, 1 ರಿಂದ 10ನೇ ತರಗತಿಯವರೆಗೆ, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿವೇತನ: ಕೋರ್ಸುವಾರು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿ ವೇತನ ಮೊತ್ತವನ್ನು ಜಮಾ ಮಾಡಲಾಗುವುದು. ಪೋಷಕರ ವಾರ್ಷಿಕ ಆದಾಯ ರೂ.2.50 ಲಕ್ಷಗಳು ಮಿತಿಯೊಳಗಿರಬೇಕು. ಅಲೆಮಾರಿ/ಅರೆ ಅಲೆಮಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಳೆಬೀಡು, ಈ ವಸತಿ ಶಾಲೆಗೆ 06ನೇ ತರಗತಿಯಿಂದ ಪ್ರವೇಶಾತಿ ನೀಡಲಾಗುವುದು.ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಿಗೆ ಆನ್ಲೈನ್ ನಲ್ಲಿ ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಬಹುದು.
ಅಲೆಮಾರಿ/ಅರೆಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಹಾಗೂ ಹೊಸದಾಗಿ ನಿರ್ಮಾಣ ಮಾಡಿದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ನಿರ್ಮಾಣವನ್ನು ಮಾಡಿ ನಾಗರೀಕ ಸೌಲಭ್ಯವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಸ್ವಂತ ನಿವೇಶನದ ಹೊಂದಿರುವವರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಯೋಜನೆ ಅನುಷ್ಟಾನ ಮಾಡಲಾಗುವುದು. ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷಗಳು ಮಿತಿಯೊಳಗಿರಬೇಕು. ಪ್ರತಿ ಮನೆಗೆ ರೂ.1,20,000 ರಂತೆ ಸಹಾಯಧನ ನೀಡಲಾಗುವುದು.
ಸಮುದಾಯಭವನ/ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕೆ ಸಹಾಯಧನ ಮಂಜೂರು ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆರವರನ್ನು ದೂರವಾಣಿ ಸಂಖ್ಯೆ: 08172 295108 ಮೂಲಕ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.