HomeKarnatakaGOOD NEWS : 'ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ :  ಇಂದಿನಿಂದ ಹಳದಿ ಮಾರ್ಗದಲ್ಲಿ...

GOOD NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ :  ಇಂದಿನಿಂದ ಹಳದಿ ಮಾರ್ಗದಲ್ಲಿ 6 ನೇ ರೈಲು ಸಂಚಾರ ಆರಂಭ.!

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದ ಹಳದಿ ಮಾರ್ಗದಲ್ಲಿ 6 ನೇ ರೈಲು ಸಂಚಾರ ಆರಂಭವಾಗಲಿದೆ. ಈ ಕುರಿತು ಬಿಎಂಆರ್ ಸಿಎಲ್ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು 23ನೇ ಡಿಸೆಂಬರ್ 2025ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಗೆ ಪ್ರಾರಂಭಿಸಲಾಗುತ್ತಿದೆ. ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ಭಾನುವಾರಗಳಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷಗಳಾಗಿಯೇ ಮುಂದುವರಿಯಲಿದೆ.

ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಗೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದೆ ಎಂದು ಬಿಎಂಆರ್ ಸಿಎಲ್ ಅಧಿಕೃತ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular