GOOD NEWS : ರಾಜ್ಯ ಸರ್ಕಾರದಿಂದ Ph.D. ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ‘ಫೆಲೋಶಿಪ್’ ಗಾಗಿ ಅರ್ಜಿ ಆಹ್ವಾನ.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ವಿವರಗಳು http://bcwd.karnataka.gov.in ವೆಬ್ ಸೈಟ್ ನಲ್ಲಿ ಲಭ್ಯವಿದ್ದು ಅಭ್ಯರ್ಥಿಗಳು ಮಾಹಿತಿಯನ್ನು ತಿಳಿದು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿರಬೇಕು. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಪ್ರವರ್ಗ :ರೂ 4.50 ಲಕ್ಷ , 2 (ಎ), 3(ಎ) ಹಾಗೂ 3(ಬಿ) : ರೂ 3.40 ಲಕ್ಷ ಮಿತಿ ಇರಬೇಕು. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕಗಳನ್ನು ಪಡೆದಿರಬೇಕು.

ಆಸಕ್ತರು ಅರ್ಜಿಯನ್ನು ಜನವರಿ 20 ಸಂಜೆ 5 ಗಂಟೆಯೊಳಗೆ ಸಹಾಯಕ ನಿರ್ದೇಶಕರ ಕಛೇರಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂ: 215, 2ನೇ ಮಹಡಿ, ಜಿಲ್ಲಾಡಳಿ ಭವನ, ದೇವನಹಳ್ಳಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read