HomeKarnatakaಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ದಾಖಲಾತಿ ವೇಳಾಪಟ್ಟಿ ಪ್ರಕಟ

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ದಾಖಲಾತಿ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.) ಅಡಿ ದಾಖಲಾತಿ ಪ್ರಕ್ರಿಯೆ ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್ 10ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ, ಎಲ್‌ಕೆಜಿ ಮತ್ತು ಒಂದನೇ ತರಗತಿಗೆ ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 25ರ ಪ್ರಮಾಣದಲ್ಲಿ ಲಭ್ಯವಿರುವ ಸೀಟು ಹಾಗೂ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಶಾಲಾವಾರು ಸೀಟುಗಳ ಸಂಖ್ಯೆಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಮಾರ್ಚ್ 11ರಿಂದ 12ರವರೆಗೆ ಅರ್ಜಿ ಸಲ್ಲಿಸಲು ಪ್ರಯೋಗಾರ್ಥ ಅವಧಿ ಇರಲಿದೆ. ಮಾರ್ಚ್ 16 ರಿಂದ ಏಪ್ರಿಲ್ 15 ರವರೆಗೆ ಆರ್‌.ಟಿ.ಇ. ಆಡಿ ದಾಖಲಾತಿ ಕೋರಿ ಪೋಷಕರು ಆನ್ಲೈನ್ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 21ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 27ರಂದು ಆನ್ಲೈನ್ ಲಾಟರಿ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಏ. 29 ರಿಂದ ಮೇ 15 ರವರೆಗೆ ಶಾಲೆಗಳಲ್ಲಿ ದಾಖಲಾತಿ ನಡೆಯಲಿದೆ. ಮೇ 19ರಂದು ಆನ್ಲೈನ್ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular