HomeKarnatakaಪೋಷಕರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ

ಪೋಷಕರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ `LKG, UKG’ ಪ್ರಾರಂಭ

ಬೆಂಗಳೂರು : ರಾಜ್ಯ ಸರ್ಕಾರವು ಪೋಷಕರಿಗೆ ಸಿಹಿಸುದ್ದಿ ನೀಡಿದ್ದು, ಈ ವರ್ಷದ ಸೆಪ್ಟೆಂಬರ್ ನಿಂದಲೇ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳು ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಈ ವರ್ಷದ ಸೆಪ್ಟೆಂಬರ್‌ ನಿಂದ ಸರ್ಕಾರಿ ಶಾಲೆಗಳಲ್ಲಿ 4 ಹಾಗೂ 5 ವರ್ಷದ ಮಕ್ಕಳಿಗಾಗಿ ಎಲ್‌ ಕೆಜಿ ಹಾಗೂ ಯುಕೆಜಿ ತರಗತಿ ಆರಂಭಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಮೂಲಕ ರಾಜ್ಯದ ಗ್ರಾಮೀಣ ಭಾಗದ ಮಕ್ಕಳಿಗೆ ಅನುಕೂಲವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು ಆರಂಭಿಕ ಹಂತದಲ್ಲಿ ಬೆಂಗಳೂರು ದಕ್ಷಿಣದಲ್ಲಿ 10 ಮತ್ತು ಬೆಂಗಳೂರು ಉತ್ತರದಲ್ಲಿ 4 ಸೇರಿದಂತೆ 262 ಶಾಲೆಗಳಲ್ಲಿ ಎಲ್‌ಕೆಜಿ , ಯುಕೆಜಿ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸ್ತುತ, 276 ಕರ್ನಾಟಕ ಸಾರ್ವಜನಿಕ ಶಾಲೆಗಳು ಸೇರಿದಂತೆ ಸುಮಾರು 900 ಶಾಲೆಗಳು ಎಲ್‌ಕೆಜಿ ಹಾಗೂ ಯುಕೆಜಿ ವಿಭಾಗಳನ್ನು ಹೊಂದಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular