
ಪರಿಸರ ರಕ್ಷಣೆ ಹಾಗೂ ವಾಯು ಮಾಲಿನ್ಯವನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವಿದ್ಯುತ್ ಬಸ್ ಗಳ ಸೇರ್ಪಡೆಯನ್ನು ಬಿಎಂಟಿಸಿ ಮುಂದುವರೆಸಿದ್ದು, ನಾಳೆ 100 ಹೊಸ ಬಸ್ ಗಳನ್ನು ಸರ್ಕಾರ ಲೋಕಾರ್ಪಣೆ ಮಾಡಲಿದೆ.
ಡಿ.26 ರಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧ ಪೂರ್ವದ್ವಾರದ ಬೃಹತ್ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ನೂತನ ಬಸ್ ಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮತಾ ಸೀತಾರಾಮನ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಭಾಪತಿ ಬಸವರಾಜ ಹೊರಟ್ಟಿ ಮತ್ತಿತರಲಿದ್ದಾರೆ.

