HomeKarnatakaಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಜೂನ್ ಅಂತ್ಯದೊಳಗೆ ಆರಂಭ

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲು ಜೂನ್ ಅಂತ್ಯದೊಳಗೆ ಆರಂಭ

ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲನ್ನು ಜೂನ್ ಅಂತ್ಯದೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಬೆಂಗಳೂರು- ಮುಂಬೈ ನಡುವಿನ ಈ ಸೂಪರ್ ಫಾಸ್ಟ್ ರೈಲನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವ ನನ್ನ ಮನವಿಯನ್ನು ಸಹ ಪುರಸ್ಕರಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಈ ವೇಳೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪುನರಾಭಿವೃದ್ದಿ ಮತ್ತು ಹೆಚ್ಚಿನ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಹಾಗೂ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಪ್ರಸ್ತಾವನೆಯಾದ ಲೋಕಾಪುರ – ಸವದತ್ತಿ – ಧಾರವಾಡ ರೈಲ್ವೆ ಲೈನ್ ಪುನರ್ ಸರ್ವೆ ಬಗ್ಗೆ ಸುದೀರ್ಘ ಚರ್ಚೆಯಾಗಿದ್ದು, ಈ ಅಂಶಗಳ ಕುರಿತು ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೂತನ ರೈಲಿನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು. ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅನಂತ ಧನ್ಯವಾದಗಳು ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಟಿಕೆಟ್ ಕೌಂಟರ್

ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಎರಡನೇ ಪಿ.ಆರ್.ಎಸ್ (PRS) ಟಿಕೆಟ್ ಕೌಂಟರ್ ಮಧ್ಯಾಹ್ನ 2:00 ರಿಂದ ರಾತ್ರಿ 8:00 ಗಂಟೆಯ ಶಿಫ್ಟ್‌ನಲ್ಲಿ ಸ್ಥಗಿತಗೊಳಿಸಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಿಸಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಕ್ಷಣವೇ   ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆದು, ಸಾರ್ವಜನಿಕ ಹಿತದೃಷ್ಟಿಯಿಂದ ಸ್ಥಗಿತಗೊಂಡಿರುವ ಎರಡನೇ ಟಿಕೆಟ್ ಕೌಂಟರ್ ಅನ್ನು ತಕ್ಷಣವೇ ಪುನರಾರಂಭಿಸಿ ಸುಗಮ ಸೇವೆಗೆ ಅನುವು ಮಾಡಿಕೊಡಬೇಕೆಂದು ವಿನಂತಿಸಿದ್ದರು.

ಧಾರವಾಡವು ಪ್ರಮುಖ ಶೈಕ್ಷಣಿಕ ಮತ್ತು ವಾಣಿಜ್ಯ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಜನರು ರಾಜ್ಯದ ವಿವಿಧ ನಗರಗಳಿಗೆ ಇಲ್ಲಿಂದ ಪ್ರಯಾಣಿಸುತ್ತಾರೆ. ಒಂದು ಕೌಂಟರ್ ಸ್ಥಗಿತಗೊಳಿಸಿರುವುದರಿಂದ ಪ್ರಯಾಣಿಕರು ಅನಾನುಕೂಲವಾಗಿತ್ತು. 

ಅವರ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳು ಈ ಕೂಡಲೆ ಎರಡನೇ ಪಿ.ಆರ್.ಎಸ್ (PRS) ಟಿಕೆಟ್ ಕೌಂಟರ್ ಆರಂಭಕ್ಕೆ ಸೂಚಿಸಿದ್ದಾರೆ. ಇದರಿಂದ ಧಾರವಾಡದ ಜನತೆಗ ಉಪಯೋಗವಾಗಲಿದೆ. ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಅಧಿಕಾರಿಗಳಿಗೆ ಧನ್ಯವಾದಗಳು. ಪ್ರಯಾಣಿಕರ ಹಿತವೇ ನಮ್ಮ ಆದ್ಯತೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular