HomeLatest Newsಪ್ರಯಾಣಿಕರಿಗೆ ಗುಡ್ ನ್ಯೂಸ್: 40 ಕಿ.ಮೀ. ವರೆಗೂ ಬಿಎಂಟಿಸಿ ಸೇವೆ ವಿಸ್ತರಣೆ

ಪ್ರಯಾಣಿಕರಿಗೆ ಗುಡ್ ನ್ಯೂಸ್: 40 ಕಿ.ಮೀ. ವರೆಗೂ ಬಿಎಂಟಿಸಿ ಸೇವೆ ವಿಸ್ತರಣೆ

ರಾಮನಗರ(ಬೆಂಗಳೂರು ದಕ್ಷಿಣ): ಬೆಂಗಳೂರು ಕಾರ್ಪೊರೇಷನ್ ವ್ಯಾಪ್ತಿಯಿಂದ 25 ಕಿಲೋ ಮೀಟರ್ ವರೆಗೆ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಗಳ ಸೇವೆಯನ್ನು ಈಗ 40 ಕಿಲೋಮೀಟರ್ ವರೆಗೂ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ರಾಮನಗರ ಬಸ್ ನಿಲ್ದಾಣದಲ್ಲಿ ನಗರ ಸಾರಿಗೆ ಬಸ್ ಸೇವೆಗೆ ಚಾಲನೆ ನೀಡಿ ಅವರು ಮಾತನಾಡಿ, 40 ಕಿ.ಮೀ.ವರೆಗೂ ಬಿಎಂಟಿಸಿ ಬಸ್ ಸೇವೆ ವ್ಯವಸ್ಥೆಯಿಂದ ರಾಮನಗರ, ಚನ್ನಪಟ್ಟಣ, ಮಾಗಡಿಗೂ ಬಿಎಂಟಿಸಿ ಬಸ್ ಸೇವೆ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ರಾಮನಗರದಲ್ಲಿ ಈ ಹಿಂದೆಯೇ ನಗರ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು. ಆದರೆ ಹೆಚ್ಚು ದಿನ ಓಡಲಿಲ್ಲ. ಈಗ ಜನಸಂಖ್ಯೆ ಹೆಚ್ಚಾಗಿರುವುದರಿಂದ ನಾಗರ ಸಾರಿಗೆ ಬಸ್ ಗಳ ಸದುಪಯೋಗವಾಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular