ದಾವಣಗೆರೆ: ಕೆಎಸ್ಆರ್ಟಿಸಿ ಲಾಭದಲ್ಲಿದ್ದು, ಶೀಘ್ರವೇ 900 ಹೊಸ ಬಸ್ ಖರೀದಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ಹೊರವಲಯದಲ್ಲಿ ಎಂಟು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಕೆಎಸ್ಆರ್ಟಿಸಿ ಡಿಪೋ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಶಕ್ತಿ ಯೋಜನೆ ಜಾರಿಗೆ ತಂದ ಬಳಿಕ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದ ಮಹಿಳಾ ಉದ್ಯೋಗದಲ್ಲಿ ಶೇಕಡ 23ರಷ್ಟು ಹೆಚ್ಚಳವಾಗಿದೆ. ಮಹಿಳೆಯರ ಪ್ರಯಾಣದ ಟಿಕೆಟ್ ದರವನ್ನು ಸರ್ಕಾರವೇ ಭರಿಸುತ್ತಿದೆ. ಇದರಿಂದ ಕೆಎಸ್ಆರ್ಟಿಸಿ ಸಂಸ್ಥೆ ಲಾಭದಲ್ಲಿದ್ದು, ಕೆಲವೇ ದಿನಗಳಲ್ಲಿ 900 ಹೊಸ ಬಸ್ ಗಳನ್ನು ಖರೀದಿಸಿ ಅವಶ್ಯಕತೆ ಇರುವ ಕಡೆಗೆ ಸಂಚಾರ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.