ಮೈಸೂರು: ಬೇಸಿಗೆ ರಜೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಉದ್ದೇಶದಿಂದ ನೈರುತ್ಯ ರೈಲ್ವೆ ಮೈಸೂರು ವಿಭಾಗ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲಿದೆ.
ಮೈಸೂರು ಮತ್ತು ಜೋಧಪುರ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಕಾರ್ಯಾಚರಣೆ ನಡೆಯಲಿದೆ. ಮೈಸೂರು- ಜೋಧಪುರ ಎಕ್ಸ್ ಪ್ರೆಸ್ ವಿಶೇಷ ರೈಲು 06273 ಮೈಸೂರು ನಿಲ್ದಾಣದಿಂದ ರಾತ್ರಿ 8:15ಕ್ಕೆ ಸೋಮವಾರ ಏಪ್ರಿಲ್ 13, ಏಪ್ರಿಲ್ 20 ಮತ್ತು ಏಪ್ರಿಲ್ 27ರಂದು ಹೊರಡಲಿದ್ದು, ಬುಧವಾರ ಬೆಳಗ್ಗೆ 5 ಗಂಟೆಗೆ ಜೋಧಪುರ ತಲುಪಲಿದೆ.
ಜೋಧಪುರ -ಮೈಸೂರು ಎಕ್ಸ್ ಪ್ರೆಸ್ ವಿಶೇಷ ರೈಲು 06274 ಜೋಧಪುರ ನಿಲ್ದಾಣದಿಂದ ರಾತ್ರಿ 8:45ಕ್ಕೆ ಗುರುವಾರ ಏಪ್ರಿಲ್ 16, ಏಪ್ರಿಲ್ 23, ಏಪ್ರಿಲ್ 30 ರಂದು ಹೊರಡಲಿದ್ದು, ಶನಿವಾರ ಬೆಳಗ್ಗೆ 6 ಗಂಟೆಗೆ ಮೈಸೂರಿಗೆ ತಲುಪಲಿದೆ ಎಂದು ನೈರುತ್ಯ ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಧರ್ಮರಾಜ್ ಕಲಗೊಂಡ ತಿಳಿಸಿದ್ದಾರೆ.

