ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸರ್ಕಾರಿ ಸಾರಿಗೆ ಬಸ್ ಪ್ರಯಾಣ ದರ ಏರಿಕೆಯಾಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಪ್ರಯಾಣ ದರದಲ್ಲಿ ಏರಿಕೆಯಾಗುವುದಿಲ್ಲ. ಆಟೋ ಗ್ಯಾಸ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಅಭಾವ ಸರಿಪಡಿಸಲು ಕೇಂದ್ರದ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದ್ದಾರೆ.
ಸರ್ಕಾರಿ ಸಾರಿಗೆ ಬಸ್ ಗಳಿಗೆ ಪೂರೈಕೆ ಮಾಡುತ್ತಿರುವ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತದೆ ಎನ್ನುವ ಊಹಾಪೋಹಗಳಿದ್ದವು. ಇದಕ್ಕಾಗಿ ಮುಖ್ಯಮಂತ್ರಿಗಳಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಸಿ ಸಾರಿಗೆ ಬಸ್ ಗಳಿಗೆ ಪೂರೈಸುವ ಡೀಸೆಲ್ ಬೆಲೆ ಹೆಚ್ಚಿಸದಂತೆ ಕೋರಲಾಗಿತ್ತು. ಯುದ್ಧ ತಾತ್ಕಾಲಿಕವಾಗಿದ್ದು, ಹೆಚ್ಚಿನ ಪರಿಣಾಮ ಬೀರುತ್ತಿಲ್ಲ. ಬಸ್ ಪ್ರಯಾಣ ದರ ಸದ್ಯಕ್ಕೆ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.

