ರೋಗಿಗಳಿಗೆ ಗುಡ್ ನ್ಯೂಸ್: ಆಸ್ಪತ್ರೆಗಳಲ್ಲಿ ವಿಶೇಷ ಪೌಷ್ಟಿಕ ಆಹಾರ ವಿತರಿಸಲು ಇಸ್ಕಾನ್ ಜೊತೆ ಆರೋಗ್ಯ ಇಲಾಖೆ ಒಪ್ಪಂದ

ಬೆಂಗಳೂರು: ನಗರದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ವಿತರಿಸುವ ಸಂಬಂಧ ಆರೋಗ್ಯ ಇಲಾಖೆಯು ಇಸ್ಕಾನ್‌ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಇದರಿಂದ ಪ್ರತಿ ಆಸ್ಪತ್ರೆಯ 250 ರೋಗಿಗಳಿಗೆ ಪ್ರತಿ ದಿನ ಆಹಾರ ಸರಬರಾಜು ಮಾಡಲಾಗುತ್ತದೆ. ಇದಕ್ಕಾಗಿ 9 ತಿಂಗಳ ಅವಧಿಗೆ ₹1.37 ಕೋಟಿಯನ್ನು ಆರೋಗ್ಯ ಇಲಾಖೆಯಿಂದ ಭರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಸಿ.ವಿ. ರಾಮನ್ ನಗರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟ ವಿತರಿಸುವ ಮೂಲಕ ವಿಶೇಷ ಪೌಷ್ಟಿಕ ಆಹಾರ ಯೋಜನೆಗೆ ಚಾಲನೆ ನೀಡಿದ ದಿನೇಶ್ ಗುಂಡೂರಾವ್, ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಯೋಜನೆ ಅನುಷ್ಠಾನಕ್ಕೆ ಬರಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

ಎಲ್ಲಾ ರೋಗಿಗಳಿಗೆ ಒಂದೇ ರೀತಿಯ ಸಾಮಾನ್ಯ ಆಹಾರದ ಬದಲು ಅಗತ್ಯ ಪೌಷ್ಟಿಕಾಂಶ ಒದಗಿಸುವ ಆಹಾರವನ್ನು ನೀಡುವ ಈ ಯೋಜನೆಯನ್ನು ಇಸ್ಕಾನ್ ಸಂಸ್ಥೆಯ ಸಹಯೋಗದಲ್ಲಿ ಜಾರಿಗೊಳಿಸಲಾಗಿದೆ. ಪ್ರತಿದಿನ ಬೆಳಗಿನ ಉಪಹಾರ, ಸಂಜೆ ಲಘು ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ರೋಗಿಗಳಿಗೆ ವಿತರಿಸಲಾಗುವುದು. ರೋಗಿಗಳ ಚೇತರಿಕೆಗೆ ಚಿಕಿತ್ಸೆಯ ಜೊತೆಗೆ ಪೌಷ್ಟಿಕ ಆಹಾರ ಕೂಡ ಮಹತ್ವದ ಪಾತ್ರ ವಹಿಸುತ್ತದೆ. ರೋಗಿಗಳ ಆರೋಗ್ಯ ಸ್ಥಿತಿ ಮತ್ತು ವಯಸ್ಸಿಗೆ ಅನುಗುಣವಾಗಿ ಪೌಷ್ಟಿಕಾಂಶ ಅಗತ್ಯ ಕೂಡ ಭಿನ್ನವಾಗಿದೆ. ಎಲ್ಲರಿಗೂ ಒಂದೇ ರೀತಿಯ ಆಹಾರ ಸೂಕ್ತವಲ್ಲ. ಹೀಗಾಗಿ ಆಹಾರ ಪದ್ಧತಿಯನ್ನು ರೋಗಿಗಳ ವೈದ್ಯಕೀಯ ಅಗತ್ಯಗಳ ಆಧಾರದ ಮೇಲೆ ವಿಂಗಡಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲೂ ಪೌಷ್ಟಿಕ ಆಹಾರ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read