ರಾಜ್ಯದ ಪಿಂಚಣಿದಾರರಿಗೆ ಗುಡ್ ನ್ಯೂಸ್ : ಮನೆಬಾಗಿಲಿಗೆ `ಡಿಜಿಟಲ್ ಜೀವನ ಪ್ರಮಾಣ ಪತ್ರ’

ಬೆಂಗಳೂರು :  ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆಯು ‘ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’, ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವ ವ್ಯವಸ್ಥೆಯನ್ನು ಮಾಡಿದೆ.

ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ ಮನ್ ಮೂಲಕ ಆಧಾರ್  ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಓ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮನ್ ಮೂಲಕ ಕೇವಲ ರೂ. 70/- (ಜಿಎಸ್‍ಟಿ ಸೇರಿದಂತೆ) ಶುಲ್ಕನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಪ್ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಅಂಚೆ ಇಲಾಖಾ ಕಚೇರಿಯ ಸೂಪರಿಟೆಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read