ಜನತೆಗೆ ಗುಡ್ ನ್ಯೂಸ್ : ರಾತ್ರಿ 8 ಗಂಟೆಯವರೆಗೂ ಸಿಗಲಿದೆ `ನಮ್ಮ ಕ್ಲಿನಿಕ್’ ವೈದ್ಯಕೀಯ ಸೇವೆ….!

 

ಬೆಂಗಳೂರು : ಜನತೆಗೆ ಆರೋಗ್ಯ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ನಗರ ಪ್ರದೇಶಗಳ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ನಮ್ಮ ಕ್ಲಿನಿಕ್ ಸೇವೆಯಲ್ಲಿ ಬದಲಾವಣೆ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಬಡರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ನಮ್ಮ ಕ್ಲಿನಿಕ್ ಸಮಯ ಬದಲಾವಣೆ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು, ಇನ್ಮುಂದೆ ನಮ್ಮ ಕ್ಲಿನಿಕ್ ಗಳು ಮಧ್ಯಹ್ನ 12 ರಿಂದ ರಾತ್ರಿ 8 ಗಂಟೆವರೆಗೆ ಸೇವೆ ನೀಡಲು ನಿರ್ಧರಿಸಲಾಗಿದ್ದು, ಶೀಘ್ರವೇ ಸಮಯ ಬದಲಾವಣೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬಡವರು, ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು ಸಂಜೆ ಕೆಲಸ ಮುಗಿಸಿಕೊಂಡು ಬಂದ ನಂತರ ನಮ್ಮ ಕ್ಲಿನಿಕ್ ಸೇವೆ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿಯಲ್ಲಿ ಈ ಹಿಂದೆ ಇದ್ದ ನಿತ್ಯ ಬೆಳಗ್ಗೆ 9 ರಿಂದ ಮಧ್ಯಾಹ್ನ 12.30 ಕ್ಕೆ ಹಾಗೂ ಮಧ್ಯಾಹ್ನ 2 ರಿಂದ 4.30 ರವರೆಗಿನ ಸಮಯವನ್ನು ಬದಲಾವಣೆ ಮಾಡಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆನೀಡಲು ಆರೋಗ ಇಲಾಖೆ ತೀರ್ಮಾನಿಸಿದೆ ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read