ಬೆಂಗಳೂರು : ಪ್ರಸಕ್ತ (2025-26) ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-02-2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಹೆಚ್.ಡಿ. ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಲು 2026 ರ ಜನವರಿ, 09 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಅರ್ಜಿ ಪ್ರತಿ ಹಾಗೂ ಮೂಲ ದಾಖಲಾತಿಗಳನ್ನು ಜನವರಿ, 09 ರ ಸಂಜೆ 5.30 ಗಂಟೆ ಯೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮ್ಯಾನ್ಸ್ ಕಾಂಪೌಂಡ್ ಹತ್ತಿರ ದೇವರಾಜ ಅರಸು ಭವನ, ಮಡಿಕೇರಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳು ಇಲಾಖಾ ವೆಬ್ಸೈಟ್ https://bcwd.karnataka.gov.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 8050770004 (ಕಚೇರಿ ಕಾರ್ಯನಿರ್ವಹಿಸುವ ಸಮಯ ಬೆಳಿಗ್ಗೆ 10.00 ರಿಂದ ಸಂಜೆ 05.30 ರವರೆಗೆ) ನ್ನು ಸಂಪರ್ಕಿಸಬಹುದು.
=

