HomeKarnataka'PhD' ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಮಾಸಿಕ ವ್ಯಾಸಂಗ ವೇತನ ಪಡೆಯಲು ಅರ್ಜಿ ಆಹ್ವಾನ.!

‘PhD’ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಮಾಸಿಕ ವ್ಯಾಸಂಗ ವೇತನ ಪಡೆಯಲು ಅರ್ಜಿ ಆಹ್ವಾನ.!

ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಆಫ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ. ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳು ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ಗಾಗಿ ಅರ್ಜಿ ಸಲ್ಲಿಸಬಹುದು.

ಕರ್ನಾಟಕದ ಶಾಸನಬದ್ದ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಜ.20 ಕೊನೆಯ ದಿನವಾಗಿರುತ್ತದೆ. ವಿವರಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnatakaka.gov.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೊ.8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular