ಬೆಂಗಳೂರು: ರಾಜ್ಯದಲ್ಲಿ 4,500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಒಳ ಮೀಸಲಾತಿ ಪ್ರಕ್ರಿಯೆ ಕಾರಣ ಸುಮಾರು 75 ಸಾವಿರ ಹುದ್ದೆ ಭರ್ತಿ ಸಾಧ್ಯವಾಗಿರಲಿಲ್ಲ. ಇದೀಗ ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ನಿರ್ಧಾರ ಅಂತಿಮವಾದಲ್ಲಿ ಎರಡನೇ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ 4500 ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ನೇಮಕಾತಿ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ, ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಲ್ಲಿ ಅಂತಹ ಸಿಬ್ಬಂದಿ, ಅಧಿಕಾರಿಗಳನ್ನು ಅಮಾನತು ಅಥವಾ ಸೇವೆಯಿಂದ ವಜಾ ಮಾಡಲಾಗುತ್ತಿದೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.
