HomeKarnatakaGOOD NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಸುದ್ದಿ : ಶೀಘ್ರದಲ್ಲೇ 6 ನೇ ವೇತನ...

GOOD NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಸುದ್ದಿ : ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿ

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವರು ಶೀಘ್ರದಲ್ಲೇ 6 ನೇ ವೇತನ ಆಯೋಗ ಜಾರಿಗೊಳಿಸಲಾಗುತ್ತದೆ. ಪೊಲೀಸ್ ಸಿಬ್ಬಂದಿಗಳಿಗೆ ಸಿಗಬೇಕಾದ ಸರಿಸಮಾನ ವೇತನ, ಭತ್ಯೆ ಸಿಗುವಂತೆ ಮಾಡಲಿದ್ದೇವೆ ಎಂದರು.
ಪೊಲೀಸರಿಗೆ ಬಡ್ತಿ ನೀಡುವ ವಿಚಾರ ಕೆಲವು ನಿಯಮಗಳನ್ನು ಬದಲಾವಣೆ ಮಾಡಬೇಕಾಗಿದೆ, ಅಂತರ್ ವಲಯ ವರ್ಗಾವಣೆಯಿಂದ ಹಿರಿಯ ಅಧಿಕಾರಿಗಳಿಗೆ ತೊಂದರೆ ಆಗುತ್ತಿದ್ದು, ಇದನ್ನು ಶೀಘ್ರದಲ್ಲೇ ಪರಿಹರಿಸಲಾಗುತ್ತದೆ ಎಂದಿದ್ದಾರೆ.

ನಾನು ಸನಾತನ ಧರ್ಮದ ಬಗ್ಗೆ ಮಾತಾಡಿಲ್ಲ. ಬೇರೆಯವರು ಏನೆಲ್ಲಾ ವಿಶ್ಲೇಷಣೆ ಮಾಡ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ. ಏನು ಹೇಳಬೇಕೋ ಅದನ್ನು ಹೇಳಿದ್ದೇನೆ ಎಂದರು. ಬರಗಾಲದ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಯಾಗಿದೆ. ಸಚಿವ ಸಂಪುಟ ಉಪ ಸಮಿತಿಯು ಕೆಲವು ತಾಲೂಕುಗಳನ್ನು ಮಾತ್ರ ಬರ ಪೀಡಿತವೆಂದು ಘೋಷಿಸಲು ಶಿಫಾರಸ್ಸು ಮಾಡಿದೆ. ಶೀಘ್ರದಲ್ಲೇ ಬರಪೀಡಿತ ಪಟ್ಟಿ ಘೋಷಣೆ ಮಾಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular